Celebration of Karnatak Rajyotsava (01/11/2022)
ಕನಕದಾಸ ಶಿಕ್ಷಣ ಸಮಿತಿಯ ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು 67 ನೆಯ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಜರುಗಿತು.ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ.ಬಿ.ಜಿ.ಧಾರವಾಡ ವಹಿಸಿದ್ದರು.ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕೆ.ಎಸ್.ಆರ್.ವಸತಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ.ಬಿ.ಎಂ.ಮಠ ಆಗಮಿಸಿ ಮಾತನಾಡಿ ಕನ್ನಡ ರಾಜ್ಯೋತ್ಸವದ ಹಿರಿಮೆ ಗರಿಮೆ ಹಾಗೂ ಕರ್ನಾಟಕ ಏಕೀಕರಣದ ಇತಿಹಾಸ ಕುರಿತು ತಿಳಿಸಿದರು.ಕಾರ್ಯಕ್ರಮವು ಶ್ರೀ ಗವಿಸಿದ್ಧಪ್ಪ ಬೆಳವಡಿ ಅಜ್ಜನವರ ಭಾವ ಮೂರ್ತಿಗೆ ಪೂಜೆ ಸಲ್ಲಿಸುವುದರ ಮೂಲಕ ಆರಂಭವಾಯಿತು.ನಾಡದೇವಿ ಭುವನೇಶ್ವರಿ ದೇವಿ ಭಾವ ಮೂರ್ತಿಗೆ ಪೂಜೆ ನೆರವೇರಿಸಲಾಯಿತು. ಪ್ರಶಿಕ್ಷಣಾರ್ಥಿಗಳು ನಾಡಗೀತೆ ಹಾಡಿದರು.ಪ್ರಶಿಕ್ಷಣಾರ್ಥಿ ಆನಂದ ಬಿರಾದಾರ ಪಾಟೀಲ ಸರ್ವರನ್ನು ಸ್ವಾಗತಿಸಿದರು.ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಕನ್ನಡ ಕುರಿತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಶಾಲಾ ವಿದ್ಯಾರ್ಥಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ಏಕೀಕರಣದ ಇತಿಹಾಸ ಕುರಿತು ಭಾಷಣ ಹಾಗೂ ನಾಡಿನ ಕವಿ ಪುಂಗವರು ರಚಿತ ನಾಡಗೀತೆಗಳನ್ನು ಹಾಡಿದರು.ಕೊನೆಯಲ್ಲಿ ಪ್ರಶಿಕ್ಷಣಾರ್ಥಿ ಪೂಜಾ ಕಾಂಬಳೆ ವಂದಿಸಿದರು.ಪ್ರಶಿಕ್ಷಣಾರ್ಥಿ ನಾಗಮ್ಮ ತಿಗಡಿ ಕಾರ್ಯಕ್ರಮ ನಿರೂಪಿಸಿದರು, ಸಮಾರಂಭದಲ್ಲಿ ಕೆ.ಎಸ್.ಆರ್.ಆರ್.ಪ್ರೌಢಶಾಲೆಯ ಚೇರ್ಮನ್ ರಾದ ಶ್ರೀ.ಆರ್.ಪಿ.ಪಮ್ಮಾರ, ಕಾಲೇಜಿನ ಎಲ್ಲ ಪ್ರಾಧ್ಯಾಪಕರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು, ಪ್ರಶಿಕ್ಷಣಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Celebration of Karnatak Rajyotsava